ಕಾರವಾರ : ದಾಂಡೇಲಿಯಲ್ಲಿ ನಡೆಯಲಿರುವ ಬೆಳ್ಳಿ ಹಬ್ಬದ ಸಂಭ್ರಮದ ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ರವರು ಮಂಗಳವಾರ ಮಧ್ಯಾಹ್ನ 12.30 ಗಂಟೆ ಸುಮಾರಿಗೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶುಭ ಹಾರೈಸಿ ಮಾತನಾಡಿದ ಅವರು 25ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ದಾಂಡೇಲಿಯಲ್ಲಿ ನಡೆಯುತ್ತಿರುವುದು ನಿಜಕ್ಕೂ ಕೂಡ ಸಂತಸದ ಸಂಗತಿ. ಈ ಸಮ್ಮೇಳನವನ್ನ ಯಶಸ್ವಿಗೊಳಿಸುವುದು ಎಲ್ಲರ ಜವಾಬ್ದಾರಿ. ಈ ನುಡಿ ಹಬ್ಬದಲ್ಲಿ ಜಿಲ್ಲೆಯ ಎಲ್ಲ ಜನತೆ ಭಾಗವಹಿಸುವಂತಾಗಬೇಕು. ಆ ಮೂಲಕ ಕನ್ನಡ ಕಟ್ಟುವ ಹಾಗೂ ಸಾಹಿತ್ಯದ ಅಭಿರುಚಿಯನ್ನು ಬೆಳೆಸುವ, ಸಾಂಸ್ಕೃತಿಕ ಮನಸ್ಥಿತಿಯನ್ನು ರೂಪಿಸುವ ಕೆಲಸವಾಗಬೇಕಿದೆ ಎಂದರು.