ಕಲಬುರಗಿ: ಅವರಾದ್(ಬಿ) ಬಳಿ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರ ಸಾವು: ನಗರದಲ್ಲಿ ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ
ಕಲಬುರಗಿ : ಕಲಬುರಗಿ ತಾಲೂಕಿನ ಅವರಾದ್(ಬಿ) ಗ್ರಾಮದ ಜಿಯೋ ಪೆಟ್ರೋಲ್ ಬಂಕ್ ಬಳಿ ಭೀಕರ ಸರಣಿ ಅಪಘಾತದಲ್ಲಿ ನಾಲ್ವರ ದುರ್ಮರಣಕ್ಕಿಡಾದ ಘಟನೆಗೆ ಸಂಬಂಧಿಸಿದಂತೆ, ನಗರದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.. ನ8 ರಂದು ಬೆಳಗ್ಗೆ 7 ಗಂಟೆಗೆ ಮಾಹಿತಿ ಲಭ್ಯವಾಗಿದೆ... ಬೈಕ್ ಮತ್ತು ಕಾರಿಗೆ ಪೆಟ್ರೋಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮತ್ತು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದರು.. ಇನ್ನೂ ಅಪಘಾತದಲ್ಲಿ ತಮ್ಮವರನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ನಗರದ ಜಿಲ್ಲಾಸ್ಪತ್ರೆ ಬಳಿ ಮುಗಿಲುಮುಟ್ಟಿತ್ತು.