ಚಿತ್ರದುರ್ಗ: ನಗರದ ಡಿಸಿ ಕಚೇರಿಯಲ್ಲಿನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಕೆ.ಪಿ.ಎಂ.ಇ ಕುರಿತು ಪ್ರಾಧಿಕಾರದ ಜಿಲ್ಲಾ ಮಟ್ಟ ಸಭೆ
ನಕಲಿ ವೈದ್ಯರ ಪತ್ತೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿನ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆಯಡಿ, ಪ್ರತಿ ತಾಲ್ಲೂಕಿನಲ್ಲಿಯೂ ಪ್ರತ್ಯೇಕ ಜಾರಿ ತಂಡಗಳನ್ನು ರಚಿಸಿ ನಕಲಿ ವೈದ್ಯರ ಪತ್ತೆಗೆ ಶೋಧನೆ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಕೆ.ಪಿ.ಎಂ.ಇ. ಕುರಿತು ಜರುಗಿದ ಜಿಲ್ಲಾ ಮಟ್ಟದ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಾದ್ಯಂತ ಅರ್ಹ ವಿದ್ಯಾರ್ಹತೆ ಮತ್ತು ಅಧಿಕೃತ ನೋಂದಣಿ ಇಲ್ಲದೆ ವೈದ್ಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರನ್ನು ಪತ್ತೆ ಹಚ್ಚಿ, ಅವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದರು.