ಈ ರಾಜ್ಯ ಸರಕಾರ ತಾರತಮ್ಯ ಮಾಡುತ್ತಿದೆ; ಕಾನೂನು- ಸುವ್ಯವಸ್ಥೆ ಹಾಳಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ತಿಳಿಸಿದ್ದಾರೆ. ಮಾನ್ಯ ರಾಜ್ಯಪಾಲರನ್ನು ಸೋಮವಾರ ಮಧ್ಯಾಹ್ನ 3:30 ರ ಸುಮಾರಿಗೆ ಭೇಟಿ ಮಾಡಿದ ಬಳಿಕ ಅವರು ಲೋಕಭವನದ ಮುಂಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ನಾವೆಲ್ಲರೂ ಹೋಗಿ ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿ ಬಂದಿದ್ದೇವೆ ಎಂದು ಹೇಳಿದರು. ಕೆಲವರಿಗೆ ಸುಣ್ಣ- ಇನ್ನೂ ಕೆಲವರಿಗೆ ಬೆಣ್ಣೆ ಇಡುವ ಕೆಲಸವನ್ನು ಈ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಟೀಕಿಸಿದರು. ಈ ಎಲ್ಲ ವಿಷಯಗಳನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದರು.