ಜೇವರ್ಗಿ ಪಟ್ಟಣದ ಹೊರವಲಯದಲ್ಲಿರುವ ಓಂ ನಗರ್ ಬಡಾವಣೆಯ ಹತ್ತಿರ ಸೈಕಲ್ ಮೇಲೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯ ಕೈ ನುಜ್ಜುಗುಜ್ಜಾಗಿ ಗಂಭೀರಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಮೌಲಾನಾ ಆಜಾದ್ ಶಾಲೆಯ ವಿದ್ಯಾರ್ಥಿ 15 ವರ್ಷದ ಇರ್ಫಾನ್ ದಾವಲ್ ಪಟೇಲ್ ಘಟನೆಯಲ್ಲಿ ಗಾಯಗೊಂಡು ಚಿಂತಾಜನಕ ಸ್ಥೀತಿಯಲ್ಲಿದ್ದು, ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯಪೂರದಿಂದ ಕಲಬುರಗಿ ಆಗಮಿಸುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಘಟನೆಗೆ ಶಾಲೆ ಸ್ಥಳಾಂತರ ಮಾಡಿದ್ದೆ ಕಾರಣ ಎಂದು ಸ್ಥಳಿಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪಟ