ಅಥಣಿ: ಅಥಣಿ ಜೋಡು ಕೆರೆ ಕಾಮಗಾರಿ ಪರಿಶೀಲಿಸಿದ ಸಚಿವ ಲಕ್ಷ್ಮಣ ಸವದಿ
Athni, Belagavi | Oct 22, 2026 ಅಥಣಿ ಪಟ್ಟಣದ ಜೋಡು ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಸಚಿವ ಲಕ್ಷ್ಮಣ ಸವದಿ ಅನಿರೀಕ್ಷಿತ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ರಾಜು ಗುಡೊಡಗಿ ಮತ್ತು ಮಲ್ಲು ಹುದ್ದಾರ ಉಪಸ್ಥಿತರಿದ್ದರು.