ಮಾನ್ವಿ ತಾಲೂಕಿನ ಉಟಕನೂರು ಗ್ರಾಮದಲ್ಲಿನ ಗ್ರಾಮ ಪಂಚಾಯಿತಿಗೆ ಜಿ.ಪಂ. ಸಿ.ಇ,ಓ. ಈಶ್ವರ ಕುಮಾರ ಕಾಂದೂ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ ಸರ್ಕಾರವು ಉಟಕನೂರು ಗ್ರಾಮದ ಸಮಗ್ರವಾದ ಅಭಿವೃದ್ದಿಗಾಗಿ ಉಟಕನೂರು ಗ್ರಾಮ ಪಂಚಾಯಿತಿಯನ್ನು ಕಾಯಕ ಗ್ರಾಮವೆಂದು ಆಯ್ಕೆಮಾಡಿದೆ. ಈ ಯೋಜನೆಯಡಿಯಲ್ಲಿ ಗಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲಿಕರಣಕ್ಕೆ ಹೆಚ್ಚಿನ ಅದ್ಯತೆಯನ್ನು ನೀಡಬೇಕು. ಗ್ರಾಮ ಪಂಚಾಯತಿಯಲ್ಲಿ 28 ದಾಖಲಾತಿಗಳನ್ನು ಕಡ್ಡಾಯವಾಗಿ ನಿರ್ವಹಣೆ ಮಾಡಬೇಕು ಎಂದು ಸೂಚನೆ ನೀಡಿದರು.