ಚಿಕ್ಕಮಗಳೂರು: ಆರ್ಥಿಕ, ಸಾಮಾಜಿಕ ಸಮೀಕ್ಷೆಯಲ್ಲಿ ಅಂಬೇಡ್ಕರ್ ಅಭಿಮಾನಿಗಳು ಬೌದ್ಧ ಧರ್ಮ ಬರೆಯಿಸುವಂತೆ ನಗರದಲ್ಲಿ ಪುಟ್ಟಸ್ವಾಮಿ ಮನವಿ
ಸೆ.22 ರಿಂದ ಅಕ್ಟೋಬರ್ 7 ರವರೆಗೆ ಕರ್ನಾಟಕ ಸರ್ಕಾರ ನಾಡಿಸುತ್ತಿರುವ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅಭಿಮಾನಿಗಳು ಮತ್ತು ಅನುಯಾಯಿಗಳು ಧರ್ಮದ ಕಾಲಂ ನಲ್ಲಿ ಬೌದ್ಧ ಧರ್ಮ ಎಂದು ಬರೆಯಿಸುವಂತೆ ಡಾ. ಬಿ.ಆರ್ ಅಂಬೇಡ್ಕರ್ ವಿಚಾರ ವೇದಿಕೆಯ ಚಿಕ್ಕಮಗಳೂರು ಜಿಲ್ಲಾ ಘಟಕದ ಗೌರವಾಧ್ಯಕ್ಷ ಡಿ. ಪುಟ್ಟಸ್ವಾಮಿ ಮನವಿ ಮಾಡಿದರು.