ಉಡುಪಿ: ನಮ್ಮ ಸುತ್ತ ಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಬೇಕು ನಗರದಲ್ಲಿ ಜಿಲ್ಲಾಧಿಕಾರಿ
Udupi, Udupi | Sep 20, 2025 ಇಂದು ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಮಾಹೆ ವಿಶ್ವವಿದ್ಯಾಲಯ, ಕೆನರಾ ಬ್ಯಾಂಕ್, ಕರಾವಳಿ ಕಾವಲು ಪಡೆ, ಮಾಲಿನ್ಯ ಮಂಡಳಿ ಹಾಗೂ ಇನ್ನಿತರ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಡುಪಿ ಕರಾವಳಿಯ ಪ್ರಮುಖ ಸಮುದ್ರ ತೀರ ಪ್ರದೇಶಗಳಾದ ಮಲ್ಪೆ ಬೀಚ್, ಕಾಪು ಬ್ಲೂ ಫ್ಲಾಗ್ ಬೀಚ್, ಡೆಲ್ಟಾ, ಕೋಡಿ, ತ್ರಾಸಿ-ಮರವಂತೆ, ಬೈಂದೂರಿನ ಸೋಮೇಶ್ವರ ಮುಂತಾದ ಕಡಲ ಕಿನಾರೆಯಲ್ಲಿ ಏಕಕಾಲದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಬೀಚ್ ಸ್ವಚ್ಚತಾ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಅವರು ಚಾಲನೆಯನ್ನು ನೀಡಿದರು.