ಶಿವಮೊಗ್ಗ: ಜುಲೈ 16 ರಂದು ಹೊಸನಗರ ತಾಲೂಕಿನಾದ್ಯಂತ ಅಂಗನವಾಡಿ ಶಾಲಾ ಮತ್ತು ಕಾಲೇಜುಗಳಿಗೆ ರಜೆ
ಹೊಸನಗರ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ ಈ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ದಿನ ಹೊಸನಗರ ತಾಲೂಕಿನ ಅತ್ಯಂತ ಅಂಗನವಾಡಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜುಲೈ 16 ರಂದು ರಜೆ ಘೋಷಿಸಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಸೋಮವಾರ ತಿಳಿಸಿದ್ದಾರೆ. ಮಳೆ ಹಿನ್ನಲೆ ಒಂದು ದಿನ ರಜೆ ಘೋಷಿಸಲಾಗಿದೆ ಇದೇ ರೀತಿ ಮುಂದುವರೆದರೆ ಮುಂದೆ ಮತ್ತೆ ರಜೆ ಘೋಷಿಸುವ ಕುರಿತು ತೀರ್ಮಾನಿಸಲಾಗುತ್ತದೆ ಎಂದು ತಶಿಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದಾರೆ.