ಕಾರವಾರ : ವಿಧಾನಪರಿಷತ್ ಸದಸ್ಯರಾದ ಗಣಪತಿ ಉಳ್ವೇಕರ ರವರು ‘ಶಾಸಕರ ಸ್ಥಳೀಯ ಅನುದಾನದ ಅಡಿಯಲ್ಲಿ’ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಗೆ ನೀಡಲಾದ ಟೊಯೋಟಾ ಕಂಪನಿಯ ಕ್ರಿಸ್ಟಾ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಸೋಮವಾರ ಸಂಜೆ 4:00 ಗಂಟೆ ಸುಮಾರಿಗೆ ಗಣಪತಿ ಉಳ್ವೇಕರ್ ಅವರು ಹಸಿರು ನಿಶಾನೆ ತೋರಿಸಿ ವಿದ್ಯುಕ್ತವಾಗಿ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಕುಮಾರ್.ಎನ್.ಎಂ ಹಾಗೂ ಪೊಲೀಸ್ ಅಧಿಕರು ಮತ್ತು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.