ಉಡುಪಿ: ಪ್ರತ್ಯೇಕ ಪ್ರಕರಣ ಇಬ್ಬರು ಆತ್ಮಹತ್ಯೆ
Udupi, Udupi | Sep 22, 2025 ಮದ್ಯ ಸೇವಿಸಿ ಪತ್ನಿ ಜೊತೆ ಗಲಾಟೆ ಮಾಡಿದ ಶೇಖರ ಪೂಜಾರಿ(70) ಎಂಬವರು ಮನೆಯಲ್ಲಿದ್ದ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರು ಕುಂದಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಆರೂರು ಗ್ರಾಮದ ಮೋಹನ್(47) ಎಂಬವರು ಜೀವನದಲ್ಲಿ ಜಿಗುಪ್ಪೆಗೊಂಡು ಆರೂರು ಗ್ರಾಮದ ಮೇಲಡ್ಡು ಹಾಡಿಯಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.