ಕಂಪ್ಲಿ ಪಟ್ಟಣದ ಕೆಸಿಬಿ ಎಜ್ಯುಕೇಷನಲ್ ಟ್ರಸ್ಟ್ ವತಿಯಿಂದ ಎಸ್ಎಸ್ಎಲ್ಸಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಪಿಯು ಪ್ರವೇಶಾತಿ ಪರೀಕ್ಷೆಯನ್ನು ನಾಳೆ ಆಯೋಜಿಸಲಾಗಿದೆ. ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಲಾಗುವುದು. ಜೊತೆಗೆ ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುವುದಲ್ಲದೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಟ್ರಸ್ಟ್‌ನ ಕಾರ್ಯದರ್ಶಿಗಳು ಡಿ.13,ಶನಿವಾರ ಸಂಜೆ 5ಕ್ಕೆ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಅವಕಾಶವನ್ನು ಹೆಚ್ಚಿನ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮ