ಆಳಂದ: ಪಟ್ಟಣದಲ್ಲಿ ಕಾರ್ಯಕರ್ತ ಜತೆಗೆ ಕೇಂದ್ರ ಸಚಿವ ಖೂಬಾ ಸಭೆ
ಆಳಂದ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಮಧ್ಯಾಹ್ನ 2 ಘಂಟೆ ಸುಮಾರಿಗೆ ಕೇಂದ್ರ ಸಚಿವ ಬೀದರ್ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರು ಕಾರ್ಯಕರ್ತರ ಜತೆಯಲ್ಲಿ ಸಭೆ ನಡೆಸಿದರು.ಸಭೆಯಲ್ಲಿ ಬೀದರ್ ಲೋಕಸಭಾ ಚುನಾವಣಾ ಪೂರ್ವ ತಯಾರಿಯ ಕುರಿತು ಹಾಗೂ ಪಕ್ಷ ಸಂಘಟನೆಯ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸುಭಾಷ್ ಗುತ್ತೇದಾರ್, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.