ಹಾಸನ: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ಡಿಸಿ ಕಚೇರಿ ಎಂದರು ಎಬಿವಿಪಿ ಪ್ರತಿಭಟನೆ
Hassan, Hassan | Sep 26, 2025 ಹಾಸನ: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ಮಾಡದೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.ರಾಜ್ಯದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ 432 ಪದವಿ ಕಾಲೇಜು ಗಳಲ್ಲಿ 6,000 ಖಾಯಂ ಉಪನ್ಯಾಸಕರಲ್ಲಿ 3000 ಕ್ಕಿಂತ ಹೆಚ್ಚು ಉಪನ್ಯಾಸಕರು ಈಗಾಗಲೇ ನಿವೃತ್ತಿ ಪಡೆದಿದ್ದು, ಇನ್ನು ಕೇವಲ 3000 ಖಾಯಂ ಉಪನ್ಯಾ ಸಕರೊಂದಿಗೆ 12,000 ಅತಿಥಿ ಉಪನ್ಯಾಸಕರ ಸೇವಾ ನೆರವಿನಿಂದ ಪದವಿ ತರಗತಿಗಳು ಜರುಗುತ್ತಿವೆ. ಆದರೆ ಪ್ರಸಕ್ತ ಸಾಲಿನಲ್ಲಿ ಕಾಲೇಜುಗಳು ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರಿಲ್ಲ ಎಂದರು.