ಬಳ್ಳಾರಿ: ನಗರದ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ;ಅನಾಮಧೇಯ ಮೃತ ಯುವಕನ ವಾರಸುದಾರರ ಪತ್ತೆಗೆ ಮನವಿ
ನಗರದ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹೆಚ್.ಆರ್ ಗವಿಯಪ್ಪ ವೃತ್ತದ ಬುಡಾ ಕಾಂಪ್ಲೆಕ್ಸ್ನಲ್ಲಿರುವ ಅನ್ನಪೂರ್ಣೇಶ್ವರಿ ಖಾನಾವಳಿ ಹತ್ತಿರ ಸುಮಾರು 25 ರಿಂದ 30 ವರ್ಷದ ಅನಾಮಧೇಯ ಯುವಕನನ್ನು ನ.17 ಯಾವುದೋ ದುರುದ್ದೇಶದಿಂದ ಕೊಲೆ ಮಾಡಿದ್ದು, ಮೃತ ಯುವಕನ ವಾರಸುದಾರರ ಬಗ್ಗೆ ತಿಳಿದಿರುವುದಿಲ್ಲ. ಪತ್ತೆಗೆ ಸಹಕರಿಸಬೇಕು ಎಂದು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ಚಹರೆ ಗುರುತು: ಅಂದಾಜು 5.5 ಅಡಿ ಎತ್ತರ, ಕೋಲು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾನೆ. ಮೃತನ ಮೈಮೇಲಿನ ಬಟ್ಟೆಗಳು: ನೀಲಿ ಬಣ್ಣದ ಬಿಳಿ ಬಣ್ಣದ ಗೆರೆಗಳುಳ್ಳ ಅರ್ಧ ತೋಳಿನ ಟೀ-ಶರ್ಟ್, ತಿಳಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಮತ್ತು ಹಸಿರು ಬಣ್ಣದ ಚಡ್ಡಿ ಧರಿಸಿರುತ್ತಾನೆ.