ಸಿದ್ದಾಪುರ: ತಾಲೂಕಿನ ಮಳವತ್ತಿಯಲ್ಲಿ ನಿರ್ಮಾಣವಾಗಲಿರುವ ಸಾಮಾಜಿಕ ಅರಣ್ಯ ವಲಯದ ಸಿದ್ದಾಪುರ ಕಚೇರಿ ಹಾಗೂ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಮಂಗಳವಾರ ಮಧ್ಯಾಹ್ನ 12:30 ಗಂಟೆ ಸುಮಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಭೀಮಣ್ಣ ನಾಯ್ಕ ಅವರು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದ ಕಟ್ಟಡ ನಿರ್ಮಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಸಿದ್ದಾಪುರ ಪಟ್ಟಣ ಪಂಚಾಯತಿಯ ಸ್ಥಾಯಿ ಸಮಿತಿ ಅಧ್ಯಕ್ಷ ವಿಜೇಂದ್ರ ಗೌಡರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ. ಹೀರಾಲಾಲ್ ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.