ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶುಕ್ರವಾರ ಸದಾಶಿವನಗರದಲ್ಲಿ ಮಾತನಾಡಿ, ಮುಖ್ಯಮಂತ್ರಿಗಳು ಐದು ವರ್ಷಗಳ ಕಾಲ ತಾವೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದಾಗಿ ಹೇಳಿದ್ದಾರೆ. ಈ ವಿಚಾರವಾಗಿ ತಾನು ಮಾತನಾಡುವುದಿಲ್ಲ ಎಂದ ಅವರು, ಪಕ್ಷದ ಶಾಸಕರು ಮಂತ್ರಿ, ಮುಖ್ಯಮಂತ್ರಿ ಆಗಲು ಅರ್ಹರಿರುತ್ತಾರೆ ಎಂದು ತಿಳಿಸಿದರು. ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ, ತಾನೂ ಅದಕ್ಕೆ ಬದ್ಧನಾಗಿರುವುದಾಗಿ ಅವರು ಸ್ಪಷ್ಟಪಡಿಸಿದರು.