ರಾಯಬಾಗ: ಬಸವಣ್ಣ ಲಿಂಗಾಯತ ಧರ್ಮವನ್ನು ಸ್ಥಾಪಿಸಿಲ್ಲ: ಬಸನಗೌಡ ಪಾಟೀಲ್ ಯತ್ನಾಳ್
ಬಸವಣ್ಣನವರು ಲಿಂಗಾಯತ ಧರ್ಮವನ್ನು ಮಾಡಿಲ್ಲ, ಕೆಲವು ಕಂಪನಿಗಳು ಅದನ್ನು ತಯಾರು ಮಾಡಿಕೊಂಡಿವೆ. ಬಸವಣ್ಣನವರು ಹಿಂದೂ ಸಮಾಜದಲ್ಲಿ ಮೌಢ್ಯಗಳ ವಿರುದ್ಧ ಹೋರಾಡಿದ್ದಾರೆಯೇ ಹೊರತು ಲಿಂಗಾಯತ ಧರ್ಮವನ್ನು ಸ್ಥಾಪನೆಯೇ ಮಾಡಿಲ್ಲ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಚರ್ಚೆಯೊಂದನ್ನು ಹುಟ್ಟುಹಾಕಿದ್ದಾರೆ.