ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ: ಹಲವೆಡೆ ಸಿಡಿಲು ಬಡಿದು ಹಾನಿ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಬುಧವಾರ ಗುಡುಗು-ಮಿಂಚಿನ ಸಹಿತ ಭಾರಿ ಮಳೆಯಾಗಿದೆ. ಹಲವೆಡೆ ಸಿಡಿಲು ಬಡಿದು ಹಾನಿಯಾಗಿದೆ ಎಂದು ವರದಿಯಾಗಿದೆ. ಮೂಡುಬಿದಿರೆಯಲ್ಲಿ ಸಾಧಾರಣ ಮಳೆಯಾಗಿದೆ.