ಬೆಂಗಳೂರು ದಕ್ಷಿಣ: ಬೊಮ್ಮನಹಳ್ಳಿ ಪಹಲ್ಗಾಮ್ ಹತ್ಯಾಕಾಂಡ ಖಂಡಿಸಿ ಬಿಜೆಪಿ ವತಿಯಿಂದ ಪಂಜಿನ ಮೆರವಣಿಗೆ, ಶಾಸಕ ಸತೀಶ್ ರೆಡ್ಡಿ ರವರಿಂದ ಚಾಲನೆ.
ಬೊಮ್ಮನಹಳ್ಳಿಯಲ್ಲಿ ಕಾಶ್ಮೀರದ ಪಹಲ್ಗಾಮ್ ಹತ್ಯಾಕಾಂಡ ಖಂಡಿಸಿ ಬಿಜೆಪಿ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಸಲಾಯಿತು. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ನಡೆದ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿ ಭಯೋತ್ಪಾದಕರ ಕುಕೃತ್ಯವನ್ನು ಖಂಡಿಸಿದರು. ಧರ್ಮದ ಹೆಸರಿನಲ್ಲಿ ಅಮಾಯಕರನ್ನ ಗುಂಡಿಕ್ಕಿ ಕೊಂದಿರುವ ಭಯೋತ್ಪಾದಕರಿಗೆ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದೆ ಎಂದು ಶಾಸಕ ಸತೀಶ್ ರೆಡ್ಡಿ ಕಿಡಿ ಕಾರಿದರು.