ಮಕ್ಕಳಲ್ಲಿನ ಪ್ರತಿಭೆ ಅನಾವರಣಕ್ಕೆ ಶಿಕ್ಷಕರ ಸಹಕಾರ ಅಗತ್ಯ ; ಮಧುಮಾಲತಿ ಪಡುವಣೆ ಕೋಲಾರ : ಪಠ್ಯದ ಜತೆಗೆ ಕ್ರೀಡೆ,ಸಾಂಸ್ಕೃತಿಕ ಚಟುವಟಿಕೆಗಳ ಅಗತ್ಯವಿದ್ದು, ಅವರಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು, ಮಕ್ಕಳನ್ನು ಸಿದ್ದಗೊಳಿಸಿ ಕರೆತರುವ ಶಿಕ್ಷಕರ ಪ್ರಯತ್ನ ಹೆಚ್ಚು ಮಹತ್ವದ್ದು ಎಂದು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಮಧುಮಾಲತಿ ಪಡುವಣೆ ತಿಳಿಸಿದರು. ಜಿಲ್ಲಾಡಳಿತ,ಜಿಪಂ, ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಗುರುವಾರ ನಗರದ ಅಂಜುಮಾನ್ ಅಲಮಿನ್ ಶಾಲಾ ಆವರಣದಲ್ಲಿ ನಡೆದ ೨೦೨೫-೨೬ನೇ ಸಾಲಿನ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ವರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.