ಹೊನ್ನಾವರ: ತಾಲೂಕಿನ ಸೂಳೆ ಮುರ್ಕಿ ಬಳಿ ಕೆಎಸ್ಆರ್ಟಿಸಿ ಬಸ್ ಪಲ್ಟಿ, 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ತಾಲೂಕಿನ ಸೂಳೆ ಮುರ್ಕಿ ಬಳಿ ಕೆಎಸ್ಆರ್ಟಿಸಿ ಬಸ್ ಪಲ್ಟಿ, 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ ಹೊನ್ನಾವರ: ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ತೀವ್ರ ಢಿಕ್ಕಿ ಸಂಭವಿಸಿದೆ. ಬಸ್ ರಸ್ತೆ ಪಕ್ಕದ ಆಳವಾದ ಕಂದಕಕ್ಕೆ ಉರುಳಿದೆ. ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ತಿರುವುನಲ್ಲಿ ನಡೆದಿದೆ. ಈ ಭೀಕರ ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸೂಳೆಮುರ್ಕಿ ಕ್ರಾಸ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್ಗೆ ಢಿಕ್ಕಿ ಹೊಡೆದ ಪರಿಣಾಮ, ಬಸ್ನ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ ಪಲ್ಟಿಯಾಗಿದೆ.