ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಜಿಲ್ಲಾಡಳಿತ ಮತ್ತು ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಭಾರತೀಯ ವಾಯುಪಡೆ (ಐ.ಎ.ಎಫ್) ಆಕರ್ಷಕ ಏರ್ ಶೋ ನಡೆಸಿಕೊಟ್ಟಿತು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾರತೀಯ ವಾಯು ಪಡೆಯ ಗ್ರೂಪ್ ಕ್ಯಾಪ್ಟನ್ ಎಸ್.ಕೆ. ಮಿಶ್ರಾ ಅವರು ನೇತೃತ್ವದಲ್ಲಿ ಸಾರಂಗ್ ತಂಡದ ಪೈಲೆಟ್‌ಗಳು ಹಾಗೂ ಸಹ ಪೈಲಟ್ ಸೇರಿದಂತೆ 72 ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀ ಕಾಂತ ರೆಡ್ಡಿ ಅವರು ಇಂದು ಗೌರವ ಸಮರ್ಪಣೆ ನೀಡಿದರು.