ಚಿಕ್ಕಬಳ್ಳಾಪುರ: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ಕಾಯ್ದೆಗೆ ಆಗ್ರಹಿಸಿ ಜಿಲ್ಲಾಡಳಿತ ಭವನ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನಾ ಧರಣಿ
ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಸಂಬಂಧ ಕಾಯ್ದೆಯನ್ನ ರೂಪಿಸಿ ಜಾರಿಗೊಳಿಸಲು ಒತ್ತಾಯಿಸಿ ಇಂದು ಸೋಮವಾರ ಮಧ್ಯಾಹ್ನ 12:30 ಗಂಟೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟನಾ ಧರಣಿ ನಡೆಸಿದರು. ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇಕಡ 100ರಷ್ಟು ಹುದ್ದೆಗಳು ಕನ್ನಡಗರಿಗೆ ಮೀಸಲಿಡಬೇಕು ಎಂಬ ಹಕ್ಕು ಒತ್ತಾಯ ಸೇರಿದಂತೆ ಹತ್ತು ಹಕ್ಕು ಒತ್ತಾಯ ಮನವಿಯನ್ನ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂಆರ್ ಲೋಕೇಶ್ ಅವರು ನೀಡಿದರು