ಶಿರಸಿ : ಜಗತ್ತಿನಲ್ಲಿ ವಿಶಿಷ್ಟವಾಗಿ ಎಲ್ಲರನ್ನೂ ಪ್ರೀತಿಸುವ ವಿವಿಧ ಸಂಪ್ರದಾಯಗಳನ್ನು ಒಳಗೊಂಡಿರುವಂತ ವಿಶಿಷ್ಟ ಧರ್ಮ ಹಿಂದೂ ಧರ್ಮವಾಗಿದ್ದು, ಈ ಸನಾತನ ಹಿಂದೂ ಧರ್ಮದ ರಕ್ಷಣೆ ಪ್ರತಿಯೊಬ್ಬನ ಕರ್ತವ್ಯವಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು. ಅವರು ಶನಿವಾರ ಮಧ್ಯಾಹ್ನ 12:00 ಗಂಟೆ ಸುಮಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗ್ರಾಮ ಪಂಚಾಯತ್ ದೊಡ್ನಳ್ಳಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ದೊಡ್ನಳ್ಳಿ ಇವರೆಲ್ಲರ ಸಹಯೋಗದಲ್ಲಿ ಏಸಳೆಯ ಈಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.