ಚಿಕ್ಕನಾಯಕನಹಳ್ಳಿ: ಹುಳಿಯಾರಿನಲ್ಲಿ ಸಂತೆ ಸ್ಥಳಾಂತರ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ
ಸಂತೆ ಸ್ಥಳಾಂತರ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಪಟ್ಟಣ ಪಂಚಾಯತಿ ಅಧಿಕಾರಿ, ಜನಪ್ರತಿನಿಧಿಗಳ ವಿರುದ್ದ ಹುಳಿಯಾರು ಪಟ್ಟಣದಲ್ಲಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣ ಪಂಚಾಯತಿ ಎದುರೇ ಅಡುಗೆ ತಯಾರಿಸಿ ಸೋಮವಾರ ಸಂಜೆ 5.30 ರ ಸಮಯದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಜಯಕರ್ನಾಟಕ ರಕ್ಷಣಾ ವೇದಿಕೆ, ಮಹಿಳಾ ಸಂಘ, ಆಟೋ ಚಾಲಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಪಾಲ್ಗೊಂಡಿದ್ದವು. ಬಸ್ ನಿಲ್ದಾಣದಲ್ಲಿನ ಅಶುಚಿತ್ವ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು, ಗಬ್ಬು ನಾರುವ ಶೌಚಾಲಯ, ಸಂತೆ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.