ದಾವಣಗೆರೆ: ದಲಿತರಿಗೆ ಅವಮಾನ, ಯತ್ನಾಳ್ ಬಂಧಿಸಿ: ನಗರದಲ್ಲಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ
ದಲಿತರಿಗೆ ಅವಮಾನ, ಯತ್ನಾಳ್ ಬಂಧಿಸಿ: ನಗರದಲ್ಲಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಅವರು ದಸರಾ ಹಬ್ಬ ಉದ್ಘಾಟನೆಯ ಬಗ್ಗೆ ಮಾತನಾಡುವಾಗ ಮೈಸೂರಿನ ಚಾಮುಂಡೇಶ್ವರಿ ಬೆಟ್ಟದಲ್ಲಿ ಮೈಸೂರು ದಸರಾದಲ್ಲಿ ಸನಾತನ ಧರ್ಮದವರು ಮಾತ್ರ ಚಾಮುಂಡಿ ದೇವಿಗೆ ಹೂ ಮುಡಿಸಬೇಕೆ ಹೊರತು ಒಬ್ಬ ಸಾಮಾನ್ಯ ದಲಿತ ಹೆಣ್ಣು ಮಕ್ಕಳಿಗೆ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಇಡೀ ರಾಜ್ಯದ ದಲಿತ ಹೆಣ್ಣುಮಕ್ಕಳಿಗೆ ಅವಮಾನ ಮಾಡಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ನಗರದಲ್ಲಿ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಬಣ) ಸದಸ್ಯರು ದಾವಣಗೆರೆ ನಗರದಲ್ಲಿ ಬುಧವಾರ ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.