ಶ್ರೀನಿವಾಸಪುರ: ಪ್ರಜಾಪ್ರಭುತ್ವವು ಸಮಾಜದ ಎಲ್ಲಾ ವರ್ಗದ ಜನರನ್ನು ಸಮಾನವಾಗಿ ಪರಿಗಣಿಸುತ್ತದೆ:ಪಟ್ಟಣದಲ್ಲಿಸರ್ಕಾರಿ ನೌಕರರ ಸಂಘದತಾಲ್ಲೂಕು ಅಧ್ಯಕ್ಷ ಎಂ ಬೈರೇಗೌಡ
ಪ್ರಜಾಪ್ರಭುತ್ವವು ಸಮಾಜದ ಎಲ್ಲಾ ವರ್ಗದ ಜನರನ್ನು ಸಮಾನವಾಗಿ ಪರಿಗಣಿಸುತ್ತದೆ : ಎಂ ಬೈರೇಗೌಡ ಪ್ರಜಾಪ್ರಭುತ್ವವು ಸಮಾಜದ ಎಲ್ಲಾ ವರ್ಗದ ಜನರನ್ನು ಸಮಾನವಾಗಿ ಪರಿಗಣಿಸುತ್ತದೆ ಮತ್ತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಅವರ ಭಾಗವಹಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಬೈರೇಗೌಡ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗು ವಿವಿಧ ಇಲಾಖೆ ಸಹಯೋಗದಲ್ಲಿ ಸೋಮವಾರ ಮಧ್ಯಾಹ್ನ 1 ಗಂಟೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.