ಮಳವಳ್ಳಿ: ಹಿಟ್ಟನಹಳ್ಳಿ ಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ, 5 ಮಂದಿ ಬಂಧನ
ಮಳವಳ್ಳಿ ತಾಲೂಕಿನ ಕಿರುಗಾವಲು ಪೊಲೀಸರು ಹಿಟ್ಟನಹಳ್ಳಿ ಗ್ರಾಮದ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಜೂಜಾಡುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿ 5 ಮಂದಿಯನ್ನು ಬಂಧಿಸಿದ್ದಾರೆ. ಹಿಟ್ಟನಹಳ್ಳಿ ಗ್ರಾಮದ ಲಿಂಗೇಗೌಡ ಎಂಬುವರ ನೀಲಗಿರಿ ತೋಟದ ಸಾರ್ವಜನಿಕ ರಸ್ತೆಯಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆಯ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಕಿರುಗಾವಲು ಪೊಲೀಸರು ಐವರನ್ನು ಬಂಧಿಸಿ 3450 ರೂ.ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸಂಜೆ 4 ಗಂಟೆಯಲ್ಲಿ ಪ್ರಕರಣಗಳು ದಾಖಲಾಗಿವೆ.