ಹಾಸನ: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಗರದಲ್ಲಿ ಡಿಸಿ ಸೈಕಲ್ ಸವಾರಿ
Hassan, Hassan | Sep 15, 2025 ಹಾಸನ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸೈಕಲ್ ರ್ಯಾಲಿಗೆ ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಚಾಲನೆ ನೀಡಿ ಬಳಿಕ ಸೈಕಲ್ ನಲ್ಲೆ ಸಿಟಿ ರೌಂಡ್ಸ್ ಹೊಡೆಯುವ ಮೂಲಕ ಗಮನ ಸೆಳೆದಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹೊರಟ ಸೈಕಲ್ ಜಾಥಾ ನಗರದ ಎನ್ಆರ್ ಸರ್ಕಲ್ ಹೇಮಾವತಿ ಪ್ರತಿಮೆ ಆರ್.ಸಿ ರೋಡ್, ಎಂಜಿ ರೋಡ್ ಹೀಗೆ ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ದೂದ್ ಪೀರ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಸೈಕಲ್‌ನಲ್ಲಿ ಜಿಲ್ಲಾಧಿಕಾರಿಗಳನ್ನು ಹಿಂಬಾಲಿಸಿ ಪ್ರಜಾಪ್ರಭುತ್ವ ದಿನಾಚರಣೆಯ ಸಂದೇಶ ಸಾರಿದರು.