ಸಕ್ಕರ ಗ್ರಾಮದಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಸಚಿವ ಡಿ ಸುಧಾಕರ್ ಚಾಲನೆ ನೀಡಿದ್ದಾರೆ. ಶನಿವಾರ ಮಧ್ಯಾಹ್ನ 12 ಗಂಟೆಗೆ ಸಕ್ಕರ ಗ್ರಾಮದಲ್ಲಿ ಗ್ರಾಮಾಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಆದಷ್ಟು ಬೇಗ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಮುಗಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.