ಚಿಕ್ಕಬಳ್ಳಾಪುರ: ಲೋಕಯುಕ್ತ ಬಿಎಸ್.ಪಾಟೀಲ್ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮಕ್ಕೆ ಭೇಟಿ
ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರ ಸತ್ಯ ಸಾಯಿ ಸಂಸ್ಥೆಯು ಕೋಟ್ಯಂತರ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ಶಿಕ್ಷಣ ನೀಡಿದೆ. ಆರೋಗ್ಯ ಸೇವೆಗಳ ಮೂಲಕ ಸಮಾಜಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿದೆ. ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದೆ. ಹೆಮ್ಮರವಾಗಿ ಬೆಳೆದಿದೆ. ನಮ್ಮ ಶ್ರೀಮಂತ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಉಳಿಸಿ, ಬೆಳೆಸುವುದು ಸಹ ಮೂಲಭೂತ ಕರ್ತವ್ಯ. ಹಣ, ವಿದ್ಯೆ ಸಂಪತ್ತು ಏನೇ ಇದ್ದರೂ ಮನುಷ್ಯನಿಗೆ ಅಂತರಿಕ ಶಾಂತಿ, ನೆಮ್ಮದಿ ಇರುವುದಿಲ್ಲ. ಆದರೆ ಸತ್ಯ ಸಾಯಿ ಗ್ರಾಮಕ್ಕೆ ಬಂದಾಗ ಇದೆಲ್ಲವೂ ಸಿಗುತ್ತದೆ. ತುಂಬಾ ವ್ಯವಸ್ಥಿತವಾಗಿ ಎಲ್ಲಾ ರೀತಿಯ ಸೇವೆಗಳನ್ನು ನೀಡುತ್ತಿದ್ದಾರೆ. ಇಲ್ಲಿಗೆ ಬಂದಾಗ ತೃಪ್ತಿ ಮತ್ತು ಸಂತೋಷವನ್ನು ಅನುಭವಿಸುತ್ತೀರಿ. ಆಧ್ಯಾತ್ಮಿಕ ಅನುಭವಕ್ಕೆ ಒಡ್ಡಿಕೊಂಡಾಗ ತೃಪ್ತರಾಗುತ್ತೀರಿ