ಹಾಸನ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದ ಆರೋಪಿಯನ್ನು ಬಂಧಿಸಲು ಆಗ್ರಹಿಸಿ ನಗರದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ
Hassan, Hassan | Oct 8, 2025 ಹಾಸನ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿರುವ ಆರೋಪಿಯನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿ ದಲಿತ ಸಂಘಟನೆ ಸಮನ್ವಯ ಸಮಿತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿ ಕಚೇರಿ ಎದುರಿನ ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ನೂರಾರು ಪ್ರತಿಭಟನಾಕಾರರು, ಆರೋಪಿ ವಕೀಲ ಕಿಶೋರ ರಾಕೇಶ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಈ ವೇಳೆ ಮಾತನಾಡಿದ ಆರ್‌ಪಿಐ ರಾಜ್ಯಾಧ್ಯಕ್ಷ ಸತೀಶ್, ಬಿ.ಆರ್. ಗವಾಯಿ ಅವರು ಧಮ್ಮ ಮಾರ್ಗದಲ್ಲಿ ನಡೆಯುತ್ತಿರುವ ಡಾ.ಅಂಬೇಡ್ಕರ್ ಅವರ ಅನುಯಾಯಿಯಾಗಿದ್ದು, ಇದನ್ನು ಮನುವಾದಿ ಮನಸ್ಥಿತಿ ಖಂಡನೀಯ ಎಂದರು.