ಕುಮಟಾ : ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ನಿಟ್ಟಿನಲ್ಲಿ ಜನ ಜಾಗೃತಿಯನ್ನು ಮೂಡಿಸುವುದಕ್ಕಾಗಿ ಕುಮಟಾ ತಾಲೂಕಿನ ಗೋಕರ್ಣದ ಪೊಲೀಸರು ವಿನೂತನ ಜಾಗೃತಿ ಅಭಿಯಾನಕ್ಕೆ ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಚಾಲನೆಯನ್ನು ನೀಡಿದ್ದಾರೆ. ಯಕ್ಷಗಾನದ ವೇಷಭೂಷಣದ ಮೂಲಕ ಹೆಲ್ಮೆಟ್ ಜಾಗೃತಿಯನ್ನು ಮೂಡಿಸಲಾಗುತ್ತಿದ್ದು ಸ್ಥಳೀಯವಾಗಿ ಹಾಗೂ ತಾಲೂಕಿನಲ್ಲಿ ಈ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ದ್ವಿಚಕ್ರವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಜನ ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.