ಅಫಜಲಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಜಕುಮಾರ ಕುಂಬಾರ ಅವರು ಅದೇ ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕುರಿತಂತೆ ವಿದ್ಯಾರ್ಥಿನಿಯ ಪಾಲಕರು ಅಫಜಲಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೊಸ ವರ್ಷದಂದು ಬೆಳಗ್ಗೆ ವಿದ್ಯಾರ್ಥಿನಿಯನ್ನು ಕಾಲೇಜಿಗೆ ಕರೆಸಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪ ಕೇಳಿಬಂದಿದೆ. ಪೊಕ್ಸೋ ಕಾಯ್ದೆಯಡಿ ಪ್ರಕೆ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಾಗಿ ಭಾನುವಾರ ಐದು ಗಂಟೆಗೆ ಮಾಹಿತಿ ಲಭ್ಯವಾಗಿದೆ....