ಬೆಂಗಳೂರು ಉತ್ತರ: ಮಾದರಿ ವಾರ್ಡ್ ರೂಪಿಸಲು ಕಾರ್ಯ ಸಾಧ್ಯತಾ ವರದಿ ಸಿದ್ಧಪಡಿಸಿ: ನಗರದಲ್ಲಿ ರಾಜೇಂದ್ರ ಚೋಳನ್
ಕೇಂದ್ರ ನಗರಪಾಲಿಕೆ ವ್ಯಾಪ್ತಿಯ ಸುಂಕೆನಹಳ್ಳಿ ವಾರ್ಡ್ ಅನ್ನು ಮಾದರಿ ವಾರ್ಡ್ ಆಗಿ ರೂಪಿಸಲು ಕಾರ್ಯ ಸಾಧ್ಯತಾ ವರದಿ ಸಿದ್ಧಪಡಿಸಲು ಆಯುಕ್ತರಾದ ಶ್ರೀ ರಾಜೇಂದ್ರ ಚೋಳನ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಾಂಧಿ ಬಜಾರ್ ವ್ಯಾಪ್ತಿಯಲ್ಲಿ ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ತೆರವುಗೊಳಿಸಿ, ನವೀನ ರೀತಿಯಲ್ಲಿ ಪಾದಚಾರಿ ನಿರ್ಮಾಣ, ಬ್ಲಾಕ್ ಸ್ಪಾಟ್ ಗಳ ತೆರವು, ಅನಧಿಕೃತ ಕೇಬಲ್ ತೆರವು, ತ್ಯಾಜ್ಯ ನಿರ್ವಹಣೆ ಬಗ್ಗೆ ವ್ಯಾಪಾರಸ್ಥರಲ್ಲಿ ಅರಿವು ಮೂಡಿಸುವುದು, ಪಾದಚಾರಿ ವ್ಯಾಪಾರಿಗಳ ವ್ಯಾಪಾರಕ್ಕೆ ಸ್ಥಳ ನಿಗದಿಪಡಿಸುವುದು ಹಾಗೂ ಪಾದಚಾರಿ ಪಕ್ಕದಲ್ಲಿ ಸಸಿ ನೆಟ್ಟು ಹಸಿರೀಕರಣಗೊಳಿಸುವುದು