ಮಸ್ಕಿ ತಾಲ್ಲೂಕಿನ ಮುದಗಲ್ ಪೊಲೀಸ್ ಠಾಣೆಯಲ್ಲಿ ರಾಘವೇಂದ್ರ ಸೇರಿ 14 ಜನರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದರು ಆರೋಪಿಗಳ ಬಂಧನಕ್ಕೆ ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ. ಹಾಗಾಗಿ ಕೂಡಲೇ ಬಂಧನ ಮಾಡಬೇಕು ಎಂದು ಎಸ್.ಪಿ.ಅವರಿಗೆ ಈಶ್ವರ ಜಾದವ್ ವಕೀಲ್ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮುದಗಲ್ ಠಾಣೆಯಲ್ಲಿ ರಾಘವೇಂದ್ರ ಹಾಗೂ ಇತರ 14 ಇತರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಸೂಕ್ತ ನಿರ್ದೇಶನ ನೀಡಿ ಅವರನ್ನು ಬಂಧಿಸಲು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.