ಚಿಂತಾಮಣಿ: ದೊಡ್ಡಬೊಮ್ಮನಹಳ್ಳಿಯಲ್ಲಿ ಸುಮಾರು ₹30 ಲಕ್ಷ ರೂ.ಗಳ ವೆಚ್ಚದ ಚರಂಡಿ ಕಾಮಗಾರಿಗೆ ಭೂಮಿ ಪೂಜೆ
ಚಿಂತಾಮಣಿ ತಾಲೂಕಿನ ದೊಡ್ಡಬೊಮ್ಮನಹಳ್ಳಿ ಗ್ರಾಮದಲ್ಲಿ ಶನಿವಾರ ಸುಮಾರು 30 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾತನಾಡಿ ನಮಗೆ ಮಳೆ ಬಂದಾಗ ಸುಮಾರು ನೂರಕ್ಕೂ ಹೆಚ್ಚು ಮನೆಗಳಿಗೆ ಕೊಳಚೆ ನೀರು ನುಗ್ಗುತ್ತಿತ್ತು. ಇದರ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ರವರ ಗಮನಕ್ಕೆ ತಂದಾಗ, ಈ ಚರಂಡಿ ಕಾಮಗಾರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.