ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಾಯಿ ಹೆಸರಿನಲ್ಲಿ ವಿಭಿನ್ನವಾಗಿ ಮಕರ ಸಂಕ್ರಾಂತಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಜನನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 30ನೇ ವರ್ಷದ ಸಂಕ್ರಾಂತಿ ಹಬ್ಬದ ಅಂಗವಾಗಿ ನೂರಾರು ಹಸು–ಎತ್ತುಗಳನ್ನು ನವವಧುವಿನಂತೆ ಅಲಂಕರಿಸಿ ವಿಶೇಷ ಫ್ಯಾಷನ್ ಶೋ ಆಯೋಜಿಸಲಾಯಿತು. ಗೆಜ್ಜೆ ಕಟ್ಟಿಕೊಂಡ ಜೋಡಿ ಎತ್ತುಗಳು ಸ್ಟೇಜ್ ಮೇಲೆ ವಾಕ್ ಮಾಡಿ ಎಲ್ಲರ ಗಮನ ಸೆಳೆದವು. ಕಾರ್ಯಕ್ರಮಕ್ಕೆ ಶಾಸಕ ಶರತ್ ಬಚ್ಚೇಗೌಡ ಚಾಲನೆ ನೀಡಿ ಬಹುಮಾನಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ಸಮಾಜಮುಖಿ ಸೇವೆ ಮಾಡಿದ ನೂರಾರು ಮಹಿಳೆಯರನ್ನು ಗೌರವಿಸಲಾಯಿತು.