ದಾಂಡೇಲಿ: ಜಿಲ್ಲಾ 25 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ರೋಹಿದಾಸ ನಾಯ್ಕ ಆಯ್ಕೆ, ನಗರದಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಾಸರೆ ಮಾಹಿತಿ
ದಾಂಡೇಲಿ: ದಾಂಡೇಲಿಯಲ್ಲಿ ಡಿಸೆಂಬರ್ 13, 14, 15 ರಂದು ನಡೆಯಲಿರುವ ಉತ್ತರಕನ್ನಡ ಜಿಲ್ಲಾ 25 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಾಡಿನ ಹಿರಿಯ ಸಾಹಿತಿ ಕುಮಟಾದ ರೋಹಿದಾಸ ನಾಯ್ಕ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ತಿಳಿಸಿದ್ದಾರೆ. ಅವರು ಈ ಬಗ್ಗೆ ನಗರದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸುದ್ದಿಗೋಷ್ಡಿಯಲ್ಲಿ ಮಾಹಿತಿ ನೀಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಂಡಗೋಡ ಕಸಾಪ ಅಧ್ಯಕ್ಷ ವಸಂತ ಕೊಣಸಾಲಿ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ರೋಹಿದಾಸ ನಾಯ್ಕ ಅವರ ಹೆಸರನ್ನು ಸೂಚಿಸಿದರು. ಹೊನ್ನಾವರ ಕಸಾಪ ಅಧ್ಯಕ್ಷ ಎಸ್.ಎಚ್. ಗೌಡ ಅನುಮೋದಿಸಿದರು.