ಹುಬ್ಬಳ್ಳಿ ನಗರ: ನಗರದಲ್ಲಿ ಶ್ರೀ ಕೃಷ್ಣ ರಥೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿಯ ದೇಶಪಾಂಡೆ ನಗರದ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ದಕ್ಷಿಣ ಕನ್ನಡ ಬ್ರಾಹ್ಮಣ ಸಮಾಜದ ವತಿಯಿಂದ ಜರುಗಿದ ಶ್ರೀ ಕೃಷ್ಣ ರಥೋತ್ಸವಕ್ಕೆ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಅನಂತ ಪದ್ಮನಾಭ ಐತಾಳ, ಕಾರ್ಯದರ್ಶಿಗಳಾದ ವಾದಿರಾಜ ಕತ್ತಿ ಹಾಗೂ ಶ್ರೀ ಕೃಷ್ಣನ ಭಕ್ತರು ಉಪಸ್ಥಿತರಿದ್ದರು.