ಬೆಂಗಳೂರು ಉತ್ತರ: ಭೀಕರ ರಸ್ತೆ ಅಪಘಾತ: ತಾಯಿ, ಮಗ ಸ್ಥಳದಲ್ಲೇ ಸಾವು
ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಅಶ್ವಿನಿ ಮತ್ತು ಮಗ ಅಭಿಲಾಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರು ರಸ್ತೆಯಿಂದ ಕೆ. ಆರ್. ಮಾರ್ಕೆಟ್ ಕಡೆಗೆ ತೆರಳುತ್ತಿದ್ದಾಗ, ಕಾರು ಮತ್ತು ಕಂಟೈನರ್ ನಡುವೆ ಬೈಕ್ ಚಲಾಯಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಬೈಕ್ ಕಂಟೈನರ್ಗೆ ತಾಗಿ, ಸವಾರರು ಕೆಳಗೆ ಬಿದ್ದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಬ್ಯಾಟರಾಯನಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.