ಗುಂಡ್ಲುಪೇಟೆ ತಾಲೂಕಿನ ಮಾದಪಟ್ಟಣ ರಸ್ತೆಯಲ್ಲಿ ರಾತ್ರಿ ವೇಳೆ ಚಿರತೆಯೊಂದು ಓಡಾಟ ನಡೆಸಿದ್ದು, ವಾಹನ ಸವಾರರ ಮೊಬೈಲ್ ನಲ್ಲಿ ದೃಶ್ಯ ಸೆರೆಯಾಗಿದ್ದು ರೈತರು ಆತಂಕಗೊಂಡಿದ್ದಾರೆ. ಮಾದಪಟ್ಟಣ-ಹುಣಸನಪುರ ಮಾರ್ಗ ಮಧ್ಯೆದ ರಸ್ತೆ ಬದಿಯ ಪೊದೆಯಲ್ಲಿ ಅಡಗಿದ್ದ ಚಿರತೆ ಕಾರಿನ ಶಬ್ದ ಕೇಳಿ ಹೊರ ಬಂದು ರಸ್ತೆ ಮೂಲಕ ಎದುರಿನ ಜಮೀನಿನೊಳಗೆ ನುಗ್ಗಿದೆ. ಇದನ್ನು ಕಾರಿನಲ್ಲಿ ತೆರಳುತ್ತಿದ್ದ ಸ್ಥಳೀಯರು ಗಮನಿಸಿ ವಿಡಿಯೋ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದರಿಂದ ಸುತ್ತಮುತ್ತ ಗ್ರಾಮಸ್ಥರು ಹಾಗೂ ರೈತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ರಾತ್ರಿ ವೇಳೆ ಜಮೀನುಗಳಿಗೆ ತೆರಳದ ಪರಿಸ್ಥಿತಿ ನಿರ್ಮಾಣವಾಗಿದೆ.