ಮಾಗಡಿ: ಪಟ್ಟಣದ 15 ನೇ ವಾರ್ಡ್ ನಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಾಲಕೃಷ್ಣ ಚಾಲನೆ
ಮಾಗಡಿ ಪುರಸಭೆಯ 15ನೇ ವಾರ್ಡಿನಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಬುಧವಾರ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷರು, ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.