ಶಿರಸಿ : ವಿಶೇಷ ಚೇತನರಿಗೆ ವಿಶ್ವಾಸ ತುಂಬುವ ಮಹತ್ವದ ಕಾರ್ಯವನ್ನು ನಾವೆಲ್ಲರೂ ಸೇರಿ ಮಾಡಬೇಕಿದ್ದು, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಅಗಬೇಕಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಆಶ್ರಯದಲ್ಲಿ ಸಾಮಾಜಿಕ ಅಧಿಕಾರಿತ ಶಿಬಿರ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಲ್ಲಿ ಹಿರಿಯ ನಾಗರಿಕರಿಗೆ ಉಚಿತ ಸಾಧನಾ ಸಲಕರಣೆ ಹಾಗೂ ವಿಶೇಷಚೇತನರಿಗೆ ಉಚಿತ ಸಾಧನಾ ಸಲಕರಣೆಗಳ ಸಮರ್ಪಣಾ ಕಾರ್ಯಕ್ರಮ ಉದ್ಘಾಟಿಸಿದರು.