ಕಾರವಾರ: ಕುಮಟಾದ ಪಟ್ಟಣದ ಹೊಸ ಬಸ್ನಿಲ್ದಾಣದಲ್ಲಿ ಆಟೋ ಚಾಲಕರಿಗೆ ಕಿರುಕುಳ: ಜೈ ಭಗೀರಥ ಸಂಘದಿಂದ ನಗರದಲ್ಲಿ ಜಿಲ್ಲಾಧಿಕಾರಿಗೆ ದೂರು
ಗುರುವಾರ ಮಧ್ಯಾಹ್ನ 1.30 ಕ್ಕೆ ಕುಮಟಾ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಸ್ಥಳೀಯ ಉಪ್ಪಾರಕೇರಿ ವಾರ್ಡ್ನ ಆಟೋರಿಕ್ಷಾ ಚಾಲಕರಿಗೆ ಬಾಡಿಗೆ ಹಚ್ಚಲು, ಹಿಂದಿನ ಪಾಳಿ ಹಚ್ಚುವವರು ಅವಕಾಶ ನೀಡದೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಜೈ ಭಗೀರಥ ಆಟೋರಿಕ್ಷಾ ಚಾಲಕ ಮಾಲಕರ ಸಂಘವು ಕಾರವಾರಕ್ಕೆ ಆಗಮಿಸಿ ಜಿಲ್ಲಾಧಿಕಾರಿ ದೂರು ಸಲ್ಲಿಸಿದ್ದಾರೆ.