ಶಹಾಪುರ: ಜಿಲ್ಲೆಯ ನಾಯ್ಕಲ್, ಸಾದ್ಯಾಪುರ, ಬೆಂಡೆಬೆಂಬಳಿ ಗ್ರಾಮಗಳ ನೆರೆಹಾವಳಿ ವೀಕ್ಷಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ತಂಡ
Shahpur, Yadgir | Sep 30, 2025 ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಭೀಮ ನದಿ ಪ್ರವಾಹದಿಂದ ರೈತರ ಬೆಳೆ ಹಾನಿಯಾಗಿರುವ ಯಾದಗಿರಿ ಜಿಲ್ಲೆಯ ಹಲವು ಗ್ರಾಮಗಳಿಗೆ ಮಂಗಳವಾರ ಮಧ್ಯಾನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಇತರೆ ಮುಖಂಡರ ತಂಡ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ ಸರಕಾರ ರೈತರ ಪ್ರತೀ ಎಕರೆಗೆ 30 ಸಾವಿರ ರೂಪಾಯಿಗಳ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಗೌಡ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.