ಕೋಲಾರ: ಆರೋಗ್ಯ ಮತ್ತು ಶಿಕ್ಷಣ ಸಾಮಾಜಿಕ ವಲಯಗಳ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು ನಗರದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ
Kolar, Kolar | Nov 19, 2025 ಆರೋಗ್ಯ ಮತ್ತು ಶಿಕ್ಷಣ ಸಾಮಾಜಿಕ ವಲಯಗಳ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು ನಗರದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ ಟ್ರಸ್ಟ್ ನಿರ್ವಹಣಾ ಸಮಿತಿಯ ಮಹತ್ವದ ಸಭೆಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಸಾಮಾಜಿಕ ವಲಯಗಳ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ಜಿಲ್ಲೆಯಲ್ಲಿ ಗಣಿಗಾರಿಕೆ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಪ್ರಮುಖ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು ಮತ್ತು ಸುಮಾರು ೧.೯೩ ಕೋಟಿಗೂ ಅಧಿಕ ಮೊತ್ತದ ಬಾಕಿ ಅನು