ತಿಕೋಟಾ: ಬೈಕ್ ಸವಾರನ ನಿಯಂತ್ರಣ ತಪ್ಪಿ ಬಿದ್ದು ಸ್ಥಳದಲ್ಲಿಯೇ ಬೈಕ್ ಸವಾರ ಸಾವು ಬಿಜ್ಜರಗಿ ಗ್ರಾಮದಲ್ಲಿ ಘಟನೆ
ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬಿದ್ದು ಸ್ಥಳದಲ್ಲಿಯೇ ಸಾವನಪ್ಪಿರುವ ದುರ್ಘಟನೆ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಬೈಕ್ ಸವಾರ ಜ್ಯೋತಿರಾಮ್ ಮಾನೆ ಎಂದು ಗುರುತಿಸಲಾಗಿದೆ. ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಯಾವುದೇ ಮಾಹಿತಿ ಪಲಕ ಹಾಕದ ಹಿನ್ನೆಲೆ, ರಸ್ತೆಯ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ಸ್ಥಳದಲ್ಲಿಯೇ ಬೈಕ್ ಸವಾರ ಸಾವನಪ್ಪಿರುವ ಘಟನೆ ಸಂಭವಿಸಿದೆ. ಸ್ಥಳಕ್ಕೆ ತಿಕೋಟಾ ಪೊಲೀಸರು ಭೇಟಿ ಪರಿಶೀಲನೆ.